Dhanvitha Shekarkumartv Social Worker Periyapattana

Dhanvitha Shekarkumartv Social Worker Periyapattana Contact information, map and directions, contact form, opening hours, services, ratings, photos, videos and announcements from Dhanvitha Shekarkumartv Social Worker Periyapattana, Fence & Gate Contractor, Tirumalapura vilege, Mysore.

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ.. ಕರ್ತವ್ಯ ಲೋಪದಡಿ ಸಹಾಕ ಅಧೀಕ್ಷಕ ಈರಣ್ಣ ರಂಗಾಪುರ ಅ...
13/08/2026

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್ ರೇವಣ್ಣ ಬ್ಯಾರಕ್​ನಲ್ಲಿ ಮೊಬೈಲ್ ಪತ್ತೆ ಪ್ರಕರಣ.. ಕರ್ತವ್ಯ ಲೋಪದಡಿ ಸಹಾಕ ಅಧೀಕ್ಷಕ ಈರಣ್ಣ ರಂಗಾಪುರ ಅಮಾನತ್ತು.. ಕರ್ತವ್ಯ ಲೋಪದ ಕಾರಣ ಕೇಳಿ ಜೈಲು ಎಸ್​ಪಿ ಅನ್ಸುಕುಮಾರ್​ಗೆ ಶೋಕಾಸ್​ ನೋಟಿಸ್ ನೀಡಿದ ಜೈಲು ಡಿಜಿಪಿ ಅಲೋಕ್ ಕುಮಾರ್​​..!

07/08/2026
ಹುಣಸೂರಿನಲ್ಲಿ ಲೋಕಾಯುಕ್ತ ಬಲೆ..! ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಆಪ್ತ ಸಹಾಯಕ ಶಿವಕುಮಾರ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿ...
04/08/2026

ಹುಣಸೂರಿನಲ್ಲಿ ಲೋಕಾಯುಕ್ತ ಬಲೆ..!

ಉಪವಿಭಾಗಾಧಿಕಾರಿ ಕಾವ್ಯಾರಾಣಿ ಹಾಗೂ ಆಪ್ತ ಸಹಾಯಕ ಶಿವಕುಮಾರ್ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿರುವ ಆರೋಪ.
ಎಚ್.ಡಿ.ಕೋಟೆ ತಾಲ್ಲೂಕಿನ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ₹10.50 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆಂದು ಆರೋಪಿಸಲಾಗಿದೆ. ಈ ಪೈಕಿ ಮೊದಲ ಕಂತಾಗಿ ₹5 ಲಕ್ಷ ಪಡೆದಿದ್ದರೆಂದು, ಎರಡನೇ ಕಂತಾದ ₹5.50 ಲಕ್ಷ ಸ್ವೀಕರಿಸುವ ವೇಳೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ನಿಯಮಾನುಸಾರ ಕ್ರಮ ಕೈಗೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಲೋಕಾಯುಕ್ತ ಎಸ್‌ಪಿ ಉದೇಶ್ ತಿಳಿಸಿದ್ದಾರೆ.
ಪ್ರಕರಣದ ತನಿಖೆ ಮುಂದುವರಿದಿದ್ದು, ಆರೋಪ ಸಾಬೀತಾಗುವವರೆಗೆ ಇದು ಆರೋಪ ಮಾತ್ರ.

29/07/2026
27/07/2026
ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಗೆ ರಾಷ್ಟ್ರ ಪ್ರಶಸ್ತಿ ಗೌರವ | ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಏಕೈಕ ಪ್ರೌಢಶಾಲೆ...
23/07/2026

ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಗೆ ರಾಷ್ಟ್ರ ಪ್ರಶಸ್ತಿ ಗೌರವ | ರಾಷ್ಟ್ರ ಪ್ರಶಸ್ತಿ ಮುಡಿಗೇರಿಸಿಕೊಂಡ ಏಕೈಕ ಪ್ರೌಢಶಾಲೆ ನಮ್ಮ ಪಿರಿಯಾಪಟ್ಟಣ ತಾಲೂಕಿನ ಅತ್ತಿಗೋಡು ಶಾಲೆಯಾಗಿದೆ.

ತ್ರಿಪುರ ಡಿಜಿಪಿ ಅನುರಾಗ್ ಧಂಕರ್ ಅಗರ್ತಲಾದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಶವವಾಗಿ ಪತ್ತೆ..!ತ್ರಿಪುರ ರಾಜ್ಯದ ಪೊಲೀಸ್ ಮಹಾನಿರ್ದೇಶಕ (DGP) ಅನ...
20/07/2026

ತ್ರಿಪುರ ಡಿಜಿಪಿ ಅನುರಾಗ್ ಧಂಕರ್ ಅಗರ್ತಲಾದ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಶವವಾಗಿ ಪತ್ತೆ..!

ತ್ರಿಪುರ ರಾಜ್ಯದ ಪೊಲೀಸ್ ಮಹಾನಿರ್ದೇಶಕ (DGP) ಅನುರಾಗ್ ಧನಕರ್ ಅವರು ಅಗರ್ತಲಾದಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ತಮ್ಮ ಚೇಂಬರ್‌ನಲ್ಲಿ ಆತ್ಮಹ*ತ್ಯೆ ಶಂಕೆ..

ಆತ್ಮಹ*ತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಅಧಿಕೃತ ಮಾಹಿತಿ ಹೊರಬೀಳಲಿದೆ. ಮುಖ್ಯಮಂತ್ರಿ ಪ್ರೊ. ಡಾ. ಮಾಣಿಕ್ ಸಹಾ ಅವರು ಪೊಲೀಸ್ ಪ್ರಧಾನ ಕಚೇರಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾ

ಲಾಡ್ಜ್ ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ PSI : ಬಂಧನಉತ್ತರ ಕನ್ನಡ : ಇದು ಆರಕ್ಷಕನೇ ಭಕ್ಷಕನಾದ ಘಟನೆ. ಅಪ್ರಾಪ್ತ ಬಾಲಕಿಯನ್ನು ಪು...
09/07/2026

ಲಾಡ್ಜ್ ಗೆ ಕರೆದೊಯ್ದು ಬಾಲಕಿ ಮೇಲೆ ಅತ್ಯಾಚಾರ ಎಸಗಿದ PSI : ಬಂಧನ

ಉತ್ತರ ಕನ್ನಡ : ಇದು ಆರಕ್ಷಕನೇ ಭಕ್ಷಕನಾದ ಘಟನೆ. ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಮಂಕಿ ಠಾಣೆಯ ಪಿಎಸ್‌ಐ ಓರ್ವನನ್ನು ಬಂಧಿಸಲಾಗಿದೆ.

ಅಭಿನಂದನ್ ಗೌಡ ಬಂಧಿತ ಪಿಎಸ್ ಐ. 16 ವರ್ಷದ ಬಾಲಕಿಯನ್ನು ಭಟ್ಕಳದ ಲಾಡ್ಜ್ ಗೆ ಕರೆದೊಯ್ದು ಅತ್ಯಾಚಾರ ನಡೆಸಿದ್ದ ಎಂದು ಆರೋಪಿಸಲಾಗಿದೆ. ಸಂತ್ರಸ್ತ ಬಾಲಕಿ ನೀಡಿದ ದೂರಿನ ಮೇಲೆ ಭಟ್ಕಳ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಗಿತ್ತು.

ತನಿಖೆ ನಡೆಸಿದ ಪೊಲೀಸರು ಇದೀಗ ಪಿಎಸ್ ಐ ಅಭಿನಂದನ್ ನನ್ನು ಬಂಧಿಸಿದ್ದಾರೆ. ಭಟ್ಕಳ ಠಾಣೆಯಲ್ಲಿ ಅಭಿನಂದನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.

Address

Tirumalapura Vilege
Mysore
571104

Telephone

+9611126404

Website

Alerts

Be the first to know and let us send you an email when Dhanvitha Shekarkumartv Social Worker Periyapattana posts news and promotions. Your email address will not be used for any other purpose, and you can unsubscribe at any time.

Shortcuts

Share